Date : Tuesday, 22-03-2022
ಬೆಂಗಳೂರು: ಬಯಾಥ್ಲಾನ್ ಚಾಂಪಿಯನ್ ಶಿಪ್‌ನಲ್ಲಿ ಎರಡು ಬೆಳ್ಳಿ ಪದಕ ಪಡೆದ ಕನ್ನಡದ ಕುವರಿ ಭವಾನಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಜಮ್ಮು-ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ನಡೆದ ರಾಷ್ಟ್ರೀಯ ವಿಂಟರ್ ಬಯಾಥ್ಲಾನ್ ಚಾಂಪಿಯನ್‌ಶಿಪ್-2022ನಲ್ಲಿ ಕರ್ನಾಟಕವನ್ನು...
Date : Tuesday, 22-03-2022
ಬೆಂಗಳೂರು: ರಾಜ್ಯದಲ್ಲಿ ಅಗತ್ಯವಿರುವ 340 ಹೊಸ ಗ್ರಂಥಾಲಯಗಳನ್ನು ಸ್ಥಾಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಜೂರಾತಿ ನೀಡುವುದಾಗಿ ಪ್ರಕಟಿಸಿ, ಆದೇಶವನ್ನು ಕೂಡಲೇ ನೀಡುವುದಾಗಿ ಘೋಷಿಸಿದರು. ಇಂದು ಅವರು ಶಿಕ್ಷಣ ಫೌಂಡೇಶನ್, ಡೆಲ್ ಇಂಟರ್ನ್ಯಾಷನಲ್ ಸರ್ವೀಸ್ಸ್ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ...
Date : Tuesday, 22-03-2022
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಮಂಜೂರಾಗಿರುವ 412 ಪ್ರಾಂಶುಪಾಲರ ಹುದ್ದೆಗಳ ಪೈಕಿ 310 ಹುದ್ದೆಗಳನ್ನು ಯುಜಿಸಿ ನಿಯಮಾನುಸಾರ ಶೀಘ್ರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಪರಿಷತ್ತಿನಲ್ಲಿ ತಿಳಿಸಿದರು. ಪ್ರಶ್ನೋತ್ತರ ಕಲಾಪದಲ್ಲಿ...
Date : Tuesday, 22-03-2022
ಬೆಂಗಳೂರು: ಮೇ ತಿಂಗಳ ಮೂರನೇ ಅಥವಾ ನಾಲ್ಕನೇ ವಾರದಲ್ಲಿ ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಮಹೇಶ ಜೋಶಿ ಕಲಬುರ್ಗಿಯಲ್ಲಿ ನಿನ್ನೆ ತಿಳಿಸಿದರು. ಸಮ್ಮೇಳನದ ಪೂರ್ವಸಿದ್ಧತೆಗಾಗಿ ಬರುವ...
Date : Tuesday, 22-03-2022
ಬೆಂಗಳೂರು: ಕರ್ನಾಟಕದಲ್ಲಿ ಕ್ರೀಡೆಯ ಬೆಳವಣಿಗೆಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ರಾಜ್ಯದಲ್ಲಿ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗಾಗಿ ಕ್ರೀಡಾ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡುವುದಾಗಿ ಕ್ರೀಡಾ ಸಚಿವ ಕೆ ಸಿ ನಾರಾಯಣಗೌಡ ಅವರು ಘೋಷಣೆ ಮಾಡಿದ್ದಾರೆ. ಎಲ್ಲಾ ಕ್ರೀಡೆಗಳು ಒಂದೇ ಭಾಗದಲ್ಲಿ ಲಭ್ಯವಾಗುವಂತೆ...
Date : Tuesday, 22-03-2022
ಬೆಂಗಳೂರು: ಈ ವರ್ಷದ ಜೂನ್ ತಿಂಗಳಿನಿಂದ ಆರಂಭವಾಗುವ ಶೈಕ್ಷಣಿಕ ವರ್ಷದಿಂದಲೇ ಶಾಲಾ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಂಶಗಳನ್ನು ಸೇರ್ಪಡೆಗೊಳಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರಾಜ್ಯದ ಜನತೆಯಿಂದಲೂ ವ್ಯಾಪಕವಾದ ಬೆಂಬಲ ದೊರೆತಿದೆ. ವಿಶೇಷವೆಂದರೆ ವಿಧಾನ ಸಭೆಯ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ...
Date : Tuesday, 22-03-2022
ಬೆಂಗಳೂರು: ಯುದ್ಧಪೀಡಿತ ಉಕ್ರೇನ್ ರಾಷ್ಟ್ರದಿಂದ ತಾಯ್ನಾಡಿಗೆ ವಾಪಾಸಾಗಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರಕಾರ ಸಿಹಿ ಸುದ್ದಿಯನ್ನು ನೀಡಿದೆ. ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಅವರಿಗೆ ಶಿಕ್ಷಣವನ್ನು ಮುಂದುವರಿಸಲು ಅವಕಾಶ ನೀಡಿದೆ. ಸಂಪೂರ್ಣವಾಗಿ ಉಚಿತವಾಗಿ ಶಿಕ್ಷಣ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ...
Date : Tuesday, 22-03-2022
ಬೆಂಗಳೂರು: ರಾಜ್ಯದಲ್ಲಿ ಸೈಬರ್ ವಂಚನೆಯ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡುವ ಸಲುವಾಗಿ ಶೀಘ್ರದಲ್ಲಿ ಸೈಬರ್ ಭದ್ರತಾ ನೀತಿಯನ್ನು ಜಾರಿಗೆ ತರಲಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಅಸೋಚಂ ವತಿಯಿಂದ ವರ್ಚುವಲ್ ಆಗಿ ಆಯೋಜಿಸಲಾದ 2...
Date : Monday, 21-03-2022
ಬೆಂಗಳೂರು: ರಾಜ್ಯ ಸರ್ಕಾರದಿಂದ ಶೇ 90 ರಷ್ಟು ಷೇರು ಬಂಡವಾಳದೊಂದಿಗೆ ವಿವಿಧೋದ್ದೇಶ ಮಹಿಳಾ ಸಹಕಾರ ಸಂಘಗಳನ್ನು ಪ್ರತಿ ತಾಲ್ಲೂಕಿನಲ್ಲಿ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಘೋಷಿಸಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಕರ್ನಾಟಕ ರಾಜ್ಯ ಗೃಹ ನಿರ್ಮಾಣ...
Date : Monday, 21-03-2022
ಬೆಂಗಳೂರು: ಹಿಜಾಬ್ ಪರವಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೂರಾರು ಪಿಯು ವಿದ್ಯಾರ್ಥಿಗಳು ಫೆಬ್ರವರಿ-ಮಾರ್ಚ್‌ನಲ್ಲಿ ನಡೆದ ಪರೀಕ್ಷೆಗಳಿಗೆ ಹಾಜರಾಗಿಲ್ಲ. ಅಂತವರಿಗೆ ಪರೀಕ್ಷೆಗಳನ್ನು ಬರೆಯಲು ಮತ್ತೊಂದು ಅವಕಾಶ ಸಿಗುವುದಿಲ್ಲ ಎಂದು ಕರ್ನಾಟಕ ಸರ್ಕಾರ ಸ್ಪಷ್ಟಪಡಿಸಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದ...