Date : Tuesday, 14-12-2021
ಬೆಂಗಳೂರು: ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಮತ ಎಣಿಕೆ ಕಾರ್ಯ ಆರಂಭವಾಗಿದೆ. ರಾಜ್ಯದ 25 ವಿಧಾನಸಭಾ ಕ್ಷೇತ್ರಗಳಿಗೆ ಮೊನ್ನೆ ಡಿಸೆಂಬರ್ 10ರಂದು ಚುನಾವಣೆ ನಡೆದಿತ್ತು. ಮತ ಎಣಿಕೆ ಕಾರ್ಯ ಇಂದು ಬೆಳಗ್ಗೆ 8...
Date : Tuesday, 14-12-2021
ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆಯಲ್ಲಿರುವ ವೈದ್ಯರುಗಳು ಕರ್ತವ್ಯದ ಅವಧಿಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಸರ್ಕಾರಿ ವೈದ್ಯರು ಕರ್ತವ್ಯದ ಅವಧಿಯಲ್ಲಿ ಖಾಸಗಿ ಆಸ್ಪತ್ರೆಗೆ ಸೇವೆಸಲ್ಲಿಸುತ್ತಿದ್ದರೆ ಶಿಕ್ಷೆ ವಿಧಿಸುವ ಸ್ಪಷ್ಟ ನೀತಿಯೊಂದನ್ನು ಜಾರಿಗೆ...
Date : Monday, 13-12-2021
ಬೆಂಗಳೂರು: “ದಿವ್ಯ ಕಾಶಿ ಭವ್ಯ ಕಾಶಿ” ಕಾರ್ಯಕ್ರಮದ ಪ್ರಯುಕ್ತ ಅಲಸೂರಿನ ಸೋಮನಾಥೇಶ್ವರ ದೇವಸ್ಥಾನದಲ್ಲಿ ಇಂದು ದೇವರಿಗೆ ಪೂಜೆ ಸ್ವಾಮೀಜಿಗಳಿಗೆ ಸನ್ಮಾನ ನೆರವೇರಿಸಲಾಯಿತು. ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ಭಾಷಣದ ನೇರಪ್ರಸಾರ ವೀಕ್ಷಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಿಜೆಪಿ...
Date : Monday, 13-12-2021
ಬೆಳಗಾವಿ: 10 ದಿನಗಳ ವಿಧಾನ ಮಂಡಲ ಚಳಿಗಾಲ ಅಧಿವೇಶನ ಇಂದು ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಆರಂಭವಾಗಿದೆ. ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದ್ದು ಇದಕ್ಕೆ ಈಗಾಗಲೇ ವಿರೋಧ ಪಕ್ಷ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಈ ವಿಷಯವಾಗಿ...
Date : Monday, 13-12-2021
ಬೆಂಗಳೂರು: ಕರ್ನಾಟಕದಲ್ಲಿ ಗೋ ಹತ್ಯಾ ನಿಷೇಧ ಕಾಯ್ದೆ ಜಾರಿಗೆ ಬಂದ ಬಳಿಕ ಸುಮಾರು 10,000 ಗೋವುಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಮಾಹಿತಿ ನೀಡಿದ್ದಾರೆ. ಅಕ್ರಮ ಗೋ ಸಾಗಾಟಕ್ಕೆ ಸಂಬಂಧಿಸಿದಂತೆ 500ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದೆ. ಹಿಂದೆ...
Date : Saturday, 11-12-2021
ಬೆಂಗಳೂರು: ‘ಸೈಬರ್ ಸುರಕ್ಷಿತ ಕರ್ನಾಟಕ’ ಅಭಿಯಾನಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು. ಸೈಬರ್ ಕ್ರೈಂ ತಡೆಗಟ್ಟುವ ಸಲುವಾಗಿ ಯುವ ಸಬಲೀಕರಣ...
Date : Saturday, 11-12-2021
ಬೆಂಗಳೂರು: ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಗೋವಿಂದರಾಜನಗರ ಕ್ಷೇತ್ರದ ಶಾಸಕರಾದ ವಿ.ಸೋಮಣ್ಣ ಅವರು ಇಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೋವಿಡ್ 19 ನಿಂದ ಅಸುನೀಗಿದವರ ಕುಟುಂಬಗಳಿಗೆ ಪರಿಹಾರ ಚೆಕ್ ಹಾಗೂ ಮಂಜೂರಾತಿ ಪತ್ರವನ್ನು ನೀಡಿದರು. ಬಳಿಕ ಸುದ್ದಿಗಾರರೊಂದಿಗೆ...
Date : Saturday, 11-12-2021
ಬೆಂಗಳೂರು: ರಾಜ್ಯ ಸರ್ಕಾರದ ಬೆಳಕು ಯೋಜನೆಯಡಿ ಕೇವಲ ನೂರು ದಿನಗಳಲ್ಲಿ 1.20 ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡುವ ಮೂಲಕ ಇಂಧನ ಇಲಾಖೆ ಮಹತ್ವದ ಸಾಧನೆ ಮಾಡಿದೆ. ಈ ಮೂಲಕ ಬೆಳಕು ಯೋಜನೆ ಗ್ರಾಮೀಣ ಪ್ರದೇಶದ ಬಡವರ ಮನೆ ಬೆಳಗಿಸುವಲ್ಲಿ ಯಶಸ್ವಿಯಾಗಿದೆ.....
Date : Saturday, 11-12-2021
ಬೆಂಗಳೂರು: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕರ್ನಾಟಕ ದಾಖಲೆಯ ಸಾಧನೆ ಮಾಡಿದೆ. ಕೇವಲ 8 ತಿಂಗಳಲ್ಲಿ 12.52 ಕೋಟಿ ಮಾನವ ದಿನ ಸೃಜಿಸಲಾಗಿದೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ಕಡಿಮೆ ಅವಧಿಯಲ್ಲಿ ಅತ್ಯಧಿಕ ಮಾನವ ದಿನ ಸೃಜನೆ ಮಾಡಿದ ದಾಖಲೆ...
Date : Saturday, 11-12-2021
ನವದೆಹಲಿ: ರಾಜ್ಯದಲ್ಲಿ ಬೆಳೆ ಹಾನಿಗೆ ಸಂಬಂಧಿಸಿದಂತೆ 600 ಕೋಟಿ ರೂಪಾಯಿಗಳ ಪರಿಹಾರ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದಾರೆ. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಕೇವಲ 21 ದಿನಗಳಲ್ಲಿ 600 ಕೋಟಿ ರೂಪಾಯಿಗಳ ಬೆಳೆ ಪರಿಹಾರ ವಿತರಣೆ...