Date : Saturday, 17-07-2021
ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಈಗಾಗಲೇ ಮಕ್ಕಳು ತಮ್ಮ ಶಾಲೆಗಳಿಂದ ಪರೀಕ್ಷಾ ಪ್ರವೇಶಪತ್ರಗಳನ್ನು ಪಡೆದುಕೊಂಡಿದ್ದು, ಪರೀಕ್ಷೆಗೆ ಹಾಜರಾಗಲು ಉತ್ಸುಕರಾಗಿದ್ದಾರೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಸೋಮವಾರದಿಂದ ಆರಂಭವಾಗಲಿರುವ 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ...
Date : Saturday, 17-07-2021
ಬೆಂಗಳೂರು: ಹತ್ತನೇ ತರಗತಿ ಪರೀಕ್ಷೆಗೆ ಹಾಲ್ ಟಿಕೆಟ್ ಪಡೆಯಲಾಗದ ವಿದ್ಯಾರ್ಥಿಗಳಿಗೆ ಆಗಸ್ಟ್ ತಿಂಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಶುಲ್ಕ ಪಾವತಿ ಮಾಡದ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯಾಲಾಗದೆ ನೊಂದ ವಿದ್ಯಾರ್ಥಿನಿಯೋರ್ವಳನ್ನು ಭೇಟಿ ಮಾಡಿದ ಬಳಿಕ...
Date : Saturday, 17-07-2021
ಬೆಂಗಳೂರು: ಸಂಭಾವ್ಯ ಕೊರೋನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಸಮಸ್ಯೆಯಾಗುವುದಾಗಿ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ಸೋಂಕಿತ ಮಕ್ಕಳ ಆರೈಕೆಗೆ ಸಂಬಂಧಿಸಿದಂತೆ ರಾಜ್ಯದ ವೈದ್ಯರು ಮತ್ತು ಆಸ್ಪತ್ರೆಗಳ ಸಿಬ್ಬಂದಿಗೆ ಎಲ್ಲಾ ಜಿಲ್ಲೆಗಳಲ್ಲಿಯೂ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ ಎಂದು ಸಚಿವ...
Date : Saturday, 17-07-2021
ಬೆಂಗಳೂರು: ರೈತರು ಬೆಳೆದ ಉತ್ಪನ್ನಗಳನ್ನು ರಾಜ್ಯದ ಎಲ್ಲಾ ಭಾಗಗಳಿಗೂ ತಲುಪುವಂತೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಕೆಎಸ್‌ಆರ್‌ಟಿಸಿ ವಿನೂತನ ಹೆಜ್ಜೆ ಇರಿಸಿದೆ. ರೈತರಿಗೆ ಅಗತ್ಯ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ‘ಹಸಿರು ಬಸ್’ ಸೇವೆಯನ್ನು ಒದಗಿಸಲು ನಿಗಮ ಕಾರ್ಯಯೋಜನೆ ರೂಪಿಸಿದೆ. ಕಿಸಾನ್...
Date : Friday, 16-07-2021
ನವದೆಹಲಿ: ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಹಲವು ಯೋಜನೆಗಳಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡುವಂತೆ ಮನವಿ ಮಾಡಿದ್ದಾರೆ. ಹಾಗೆಯೇ ಬೆಂಗಳೂರು ಪೆರಿಫೆರಲ್...
Date : Friday, 16-07-2021
ಬೆಂಗಳೂರು: ರಾಜ್ಯಾದ್ಯಂತ ವೈದ್ಯಕೀಯ, ಆಯುಷ್, ದಂತ ವೈದ್ಯಕೀಯ, ಪ್ಯಾರಾ ಮೆಡಿಕಲ್ ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭ ಮಾಡಲು ಸರ್ಕಾರ ಅನುಮತಿ ನೀಡಿದೆ. ಈ ಸಂಬಂಧ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಮಾತನಾಡಿದ್ದು, ಕೊರೋನಾ ಲಸಿಕೆ ಪಡೆದಿರುವ...
Date : Friday, 16-07-2021
ಬೆಂಗಳೂರು: ಮೆಟ್ರಿಕ್ ನಂತರದ ಎಸ್‌ಸಿ ವಿದ್ಯಾರ್ಥಿಗಳ ಆಧಾರ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು ಅಂತಿಮ ಬೋರ್ಡ್ ಪರೀಕ್ಷೆಯ ನೋಂದಣಿ ಸಂಖ್ಯೆ ಬಳಸಿಕೊಂಡು ಉಚಿತ ಸ್ಕಾಲರ್ಶಿಪ್, ಇ ಕಾರ್ಡ್‌ಗಳನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಿತರಣೆ ಮಾಡಲಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್...
Date : Friday, 16-07-2021
ಬೆಂಗಳೂರು: ಕರ್ನಾಟಕಕ್ಕೆ ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್‌ಗಳಷ್ಟು ಕೊರೋನಾ ಲಸಿಕೆಗಳನ್ನು ಒದಗಿಸುವಂತೆ ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಡಿಯೋ ಸಂವಾದ ನಡೆಸಿದ ಅವರು, ರಾಜ್ಯದಲ್ಲಿ...
Date : Friday, 16-07-2021
ಬೆಂಗಳೂರು: ನಗರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೊರೋನಾ ಲಸಿಕಾ ಅಭಿಯಾನ ಮುಂದುವರಿಯಲಿದ್ದು, ಲಸಿಕೆ ಲಭ್ಯತೆಯ ಆಧಾರದಲ್ಲಿ ವಿಶೇಷ ಲಸಿಕಾ ಶಿಬಿರಗಳನ್ನು ನಡೆಸಲು ಪೂರಕ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರ್ಡ್...
Date : Friday, 16-07-2021
ಬೆಂಗಳೂರು: ಕೊರೋನಾ ಸೋಂಕಿನ ಪರಿಸ್ಥಿತಿ ಮತ್ತು ಲಸಿಕೆ ಹಂಚಿಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನೊಳಗೊಂಡಂತೆ ಆರು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದ್ದಾರೆ. ಈ ಸಂವಾದದಲ್ಲಿ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ, ತಮಿಳುನಾಡು ಮುಖ್ಯಮಂತ್ರಿ...