News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 2nd September 2026

×
Home About Us Advertise With s Contact Us

ಸಾಧನೆಗಳನ್ನು ಜನರ ಮುಂದಿಟ್ಟು, ಪಕ್ಷದ ಗೆಲುವಿಗಾಗಿ ಹಗಲು, ರಾತ್ರಿ ಶ್ರಮ: ವಿಜಯೇಂದ್ರ ಮನವಿ

ಬೆಂಗಳೂರು: ನಮ್ಮ ಮುಂದಿರುವ ಗುರಿ ಲೋಕಸಭಾ ಚುನಾವಣೆ. ಆ ಲೋಕಸಭಾ ಚುನಾವಣೆ ಆಗುವವರೆಗೂ ನಾವು ವಿಶ್ರಾಂತಿ ಪಡೆಯುವ, ಮನೆಯಲ್ಲಿ ಕುಳಿತುಕೊಳ್ಳುವ ಸಂದರ್ಭ ಉದ್ಭವಿಸಬಾರದು ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಮ್ಮ ಎದುರಾಳಿಗಳನ್ನು ಹಗುರವಾಗಿ ತೆಗೆದುಕೊಳ್ಳದೆ,...

Read More

ಲೋಕಸಭಾ ಸಮರ ದೊಡ್ಡ ಸತ್ವಪರೀಕ್ಷೆ: ಯಡಿಯೂರಪ್ಪ

ಬೆಂಗಳೂರು: ಲೋಕಸಭಾ ಸಮರವು ನಮ್ಮೆಲ್ಲರಿಗೆ ಬಹುದೊಡ್ಡ ತಿರುವಿನ ಸತ್ವ ಪರೀಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ಅರಮನೆ ಮೈದಾನದಲ್ಲಿ ಇಂದು...

Read More

ನಾಳೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ: ಲೋಕಸಭಾ ಚುನಾವಣೆಗೆ ಕಾರ್ಯತಂತ್ರ

ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿಯಲ್ಲಿ 900ಕ್ಕೂ ಹೆಚ್ಚು ಆಹ್ವಾನಿತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಗರದ ಅರಮನೆ ಮೈದಾನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಂದಿನ...

Read More

ರಾಜ್ಯದಲ್ಲಿ ಪ್ರವಾಸ, ಸಂಘಟನಾತ್ಮಕ ಕಾರ್ಯ: ಜಗದೀಶ್ ಶೆಟ್ಟರ್

ಬೆಂಗಳೂರು: ಬಿಜೆಪಿ ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನ ಗೆದ್ದಿತ್ತು. ಅದಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲು ಪ್ರಯತ್ನ- ಅಳಿಲಸೇವೆ ಮಾಡುವೆ. ಅದಕ್ಕಾಗಿ ಇಡೀ ರಾಜ್ಯದಲ್ಲಿ ಪ್ರವಾಸ ಮಾಡುವೆ. ಪಕ್ಷದ ಸೂಚನೆಯಂತೆ ಸಂಘಟನಾತ್ಮಕ ಕಾರ್ಯದಲ್ಲಿ ತೊಡಗಿಸಿಕೊಳ್ಳುವೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಜಗದೀಶ್...

Read More

ರಾಜ್ಯ ಬಜೆಟ್ ಮಂಡನೆ ಮುಂದೂಡಲು ಬಿಜೆಪಿ ಒತ್ತಾಯ

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಉಪಚುನಾವಣೆಯು ಫೆಬ್ರವರಿ 16ರಂದು ನಡೆಯಲಿದೆ. ಅದೇ ದಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದು, ಬಜೆಟ್ ಮಂಡಿಸುವ ದಿನಾಂಕವನ್ನು ಮುಂದೂಡುವಂತೆ ರಾಜ್ಯ ಸರಕಾರಕ್ಕೆ ಸೂಚಿಸಬೇಕೆಂದು ಬಿಜೆಪಿ ನಿಯೋಗವು ಒತ್ತಾಯಿಸಿದೆ. ಈ ಕುರಿತು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್,...

Read More

ಸಂವಿಧಾನವು ಎಲ್ಲ ಧರ್ಮಗ್ರಂಥಗಳಿಗಿಂತ ಶ್ರೇಷ್ಠ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ಬೆಂಗಳೂರು: ಸಂವಿಧಾನವು ಎಲ್ಲ ಧರ್ಮಗ್ರಂಥಗಳಿಗಿಂತ ಶ್ರೇಷ್ಠತೆಯನ್ನು ಪಡೆದಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಗಣರಾಜೋತ್ಸವದ ಪ್ರಯುಕ್ತ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಧ್ವಜಾರೋಹಣದ ನಂತರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದು ಸಂವಿಧಾನ ಜಾರಿಯಾದ ಮಹತ್ವದ...

Read More

ಕಾರ್ಯಕರ್ತರ ಅಪೇಕ್ಷೆಯಂತೆ ಶೆಟ್ಟರ್ ಮತ್ತೆ ಬಿಜೆಪಿಗೆ: ಯಡಿಯೂರಪ್ಪ

ಬೆಂಗಳೂರು: ನಮ್ಮೆಲ್ಲ ಕಾರ್ಯಕರ್ತರ ಅಪೇಕ್ಷೆಯಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಬಿಜೆಪಿ ಮರುಸೇರ್ಪಡೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ...

Read More

ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರ್ಪಡೆಗೊಂಡಿರುವುದರಿಂದ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬಂದಿದೆ: ವಿಜಯೇಂದ್ರ

ಬೆಂಗಳೂರು: ಹಿರಿಯ ಮುಖಂಡ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ್ದರಿಂದ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬಂದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...

Read More

‌ಕಾಂಗ್ರೆಸ್‌ ತೊರೆದು ಬಿಜೆಪಿಗೆ ಮರುಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಕೊಡಲಿಲ್ಲ ಎಂಬ ಕಾರಣಕ್ಕೆ ಪಕ್ಷ ತೊರೆದು ಕಾಂಗ್ರೆಸ್‌ ಅನ್ನು ಸೇರಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಮತ್ತೆ ಬಿಜೆಪಿಗೆ ಆಗಮಿಸಿದ್ದಾರೆ. ಇಂದು ಅವರು ಕಾಂಗ್ರೆಸ್‌ ಪಕ್ಷಕ್ಕೆ ಮತ್ತು ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ. ಇಂದು...

Read More

ಒಂದೇ ದಿನ ಚುನಾವಣೆ, ರಾಜ್ಯ ಬಜೆಟ್ ಬೇಡ: ಬಿಜೆಪಿ

ಬೆಂಗಳೂರು: ಚುನಾವಣೆ ದಿನದಂದು ರಾಜ್ಯ ಬಜೆಟ್ ಮಂಡಿಸುವುದು ಸರಿಯಲ್ಲ ಎಂದು ರಾಜ್ಯ ಬಿಜೆಪಿ ಹೇಳಿದೆ. ರಾಜಭವನದಲ್ಲಿ ಇಂದು ಈ ಕುರಿತು ಗೌರವಾನ್ವಿತ ರಾಜ್ಯಪಾಲರಿಗೆ ಬಿಜೆಪಿ ನಿಯೋಗವು ಮನವಿ ಸಲ್ಲಿಸಿತು. ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್...

Read More

Recent News

Back To Top