Date : Saturday, 26-06-2021
ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ರಾಜ್ಯಾದ್ಯಂತ ನಮ್ಮ ಕಾರ್ಯಕರ್ತರು ತಮ್ಮ ಜೀವವನ್ನೇ ಪಣವಾಗಿಟ್ಟು 4,531 ಶವಸಂಸ್ಕಾರಗಳನ್ನು ಮಾಡಿದ್ದಾರೆ. ಅವರ ಸಮಾಜಮುಖಿ ಚಿಂತನೆ ಮತ್ತು ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಅವರನ್ನು ಮಂಡಲ ಮಟ್ಟದಲ್ಲಿ ಮತ್ತು ಜಿಲ್ಲಾ ಮಟ್ಟದ ಕಾರ್ಯಕಾರಿಣಿಯಲ್ಲಿ ಸನ್ಮಾನಿಸಲು ರಾಜ್ಯಾಧ್ಯಕ್ಷ ನಳಿನ್ ಕುಮಾರ್...
Date : Saturday, 26-06-2021
ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತುಗಳ ನಿಯಂತ್ರಣಕ್ಕೆ ರೂಪಿಸಲಾದ ಎನ್‌ಡಿಪಿಎಸ್ ಕಾಯ್ದೆಗೆ ನಿಯಮಾವಳಿ ರೂಪಿಸುವ ಮೂಲಕ ಅದನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಾದಕ ವಸ್ತುಗಳ ವಿರುದ್ಧ ನಮ್ಮ ಹೋರಾಟ ವನ್ನು ಮತ್ತಷ್ಟು ಪ್ರಬಲಗೊಳಿಸುವ ನಿಟ್ಟಿನಲ್ಲಿ ಇದು...
Date : Saturday, 26-06-2021
ಬೆಂಗಳೂರು: ರಾಜ್ಯದ ಐವರು ಕ್ರೀಡಾಪಟುಗಳು ಟೊಕಿಯೋ ಒಲಿಂಪಿಕ್‌ಗೆ ಸಂಭವನೀಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಆಯ್ಕೆಯಾಗುವ ಕ್ರೀಡಾಪಟುಗಳಿಗೆ ತಲಾ 10 ಲಕ್ಷ ರೂ. ಗಳಂತೆ ಪ್ರೋತ್ಸಾಹ ಧನ ಘೋಷಣೆ ಮಾಡಲಾಗಿದೆ. ಈ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವ ನಾರಾಯಣ ಗೌಡ,...
Date : Saturday, 26-06-2021
ಉಡುಪಿ: ರಾಜ್ಯದಲ್ಲಿ ಬಳಕೆ ಮಾಡದೆ ಬೀಳುಬಿದ್ದಿರುವ 15 ಲಕ್ಷ ಹೆಕ್ಟೇರ್‌ಗಳಷ್ಟು ಕೃಷಿ ಭೂಮಿಯಲ್ಲಿ ‘ಹಡಿಲು ಭೂಮಿ ಕೃಷಿ ಅಭಿಯಾನ’ ನಡೆದರೆ ಭೂಮಿ ಮತ್ತೆ ನಳನಳಿಸಲಿದೆ ಎಂದು ಸಚಿವ ಬಿ ಸಿ ಪಾಟೀಲ್ ತಿಳಿಸಿದ್ದಾರೆ. ಉಡುಪಿಯ ಕಡೆಕಾರಿನಲ್ಲಿ ಕೇದಾರೋತ್ಥಾನ ಟ್ರಸ್ಟ್‌ನಿಂದ ನಡೆದ ಹಡಿಲು...
Date : Saturday, 26-06-2021
ಬೆಂಗಳೂರು: ಜೂನ್ 29 ರಿಂದ ತೊಡಗಿದಂತೆ ಪ್ರೈಡ್ ಮಂತ್ ಸ್ಮರಣಾರ್ಥ ಮಣಿಪಾಲ್ ಆಸ್ಪತ್ರೆ ಸಮೂಹ ಕೊರೋನಾ ಲಸಿಕಾ ಅಭಿಯಾನ ನಡೆಸಲು ಆರಂಭಿಸಲಿದೆ. ಜೂನ್ 29 ರಿಂದ ಜುಲೈ 3 ರ ವರೆಗೆ ಲಸಿಕಾ ಅಭಿಯಾನ ನಡೆಯಲಿದ್ದು, ಸ್ಪುಟ್ನಿಕ್ ವಿ ಲಸಿಕೆಯನ್ನು ಸಹ...
Date : Saturday, 26-06-2021
ಬೆಂಗಳೂರು: ರಾಜ್ಯದಲ್ಲಿ ಈ ಹಿಂದೆ ಆಡಳಿತ ಮಾಡಿದ್ದ ಕಾಂಗ್ರೆಸ್ ಪಕ್ಷವು ರಾಜ್ಯದ ಜನತೆ ಕೋವಿಡ್‍ನಿಂದ ತತ್ತರಿಸುತ್ತಿರುವ ಸಂದರ್ಭದಲ್ಲಿ ಸಹಾಯಹಸ್ತ ನೀಡುವ ಬದಲು ಕೇವಲ ಋಣಾತ್ಮಕವಾಗಿ ಟೀಕೆ ಟಿಪ್ಪಣಿ ಮಾಡುತ್ತಾ ಬಂದಿದೆ. ಅದರಲ್ಲೂ ಪ್ರಮುಖವಾಗಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ತಾನು ಆಯ್ಕೆಯಾದ...
Date : Saturday, 26-06-2021
ಬೆಂಗಳೂರು: ರಾಜ್ಯದ ಅಂಗನವಾಡಿಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸುವುದಕ್ಕೆ ಸಂಬಂಧಿಸಿದಂತೆ ಮಧ್ಯಂತರ ನಿರ್ದೇಶನ ನೀಡಲಾಗುತ್ತದೆ ಎಂದು ಹೈಕೋರ್ಟ್ ತಿಳಿಸಿದೆ. ಅಪೌಷ್ಟಿಕತೆ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ ಎಸ್ ಒಕಾ ನೇತೃತ್ವದ ವಿಭಾಗೀಯ ಪೀಠ, ರಾಜ್ಯದ...
Date : Saturday, 26-06-2021
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹಲವಾರು ಸವಾಲುಗಳು, ಉಪ ಚುನಾವಣೆಗಳನ್ನು ಸಮರ್ಥವಾಗಿ ನಿರ್ವಹಿಸಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ, ಕೊರೋನಾ ಸಂಕಷ್ಟಗಳನ್ನು,...
Date : Saturday, 26-06-2021
ಬೆಂಗಳೂರು: ಪ್ರವೇಶ ಪರೀಕ್ಷೆಗಳಿಗೆ ಹಾಜರಾಗದೆ 2017-18 ನೇ ಸಾಲಿನ ಸ್ನಾತಕೋತ್ತರ ಆಯುರ್ವೇದಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳು ತಮ್ಮ ಕೋರ್ಸ್ ಮುಂದುವರಿಸಬಹುದು ಎಂದು ಹೈಕೋರ್ಟ್ ತಿಳಿಸಿದೆ. ಈ ಸಂಬಂಧ ರಾಜ್ಯ ಹೈಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ...
Date : Saturday, 26-06-2021
ಬೆಂಗಳೂರು: ರಾಜ್ಯದಲ್ಲಿ ಶಾಲಾ ಮಕ್ಕಳ ನಿರಂತರ ಕಲಿಕೆಗೆ ಅನುಕೂಲವಾಗುವಂತೆ ಕಾರ್ಯಪಡೆಯನ್ನು ರಚಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಶಾಲೆಗಳು ಆರಂಭವಾಗಿಲ್ಲ. ಈ ಹಿನ್ನೆಲೆಯಲ್ಲಿ ಮಕ್ಕಳು ಶಿಕ್ಷಣಕ್ಕೆ ವಿಮುಖರಾಗದಂತೆ, ಅವರಿಗೆ ನಿರಂತರ ಕಲಿಕೆಯನ್ನು ಹೇಗೆ ಕಾರ್ಯಸಾಧುವಾಗಿಸಬಹುದು ಎಂಬುದಾಗಿ...